ಸದ್ಯ ಜುಲೈ 23ರಿಂದ ಟೋಕಿಯೊದಲ್ಲಿ ನಡೆಯುವ ಒಲಂಪಿಕ್ಸ್ ಮೇಲೆ ಎಲ್ಲರ ಕಣ್ಣಿದೆ. ಭಾರತ 18 ಕ್ರೀಡೆಗಳಲ್ಲಿ ಪಾಲ್ಗೊಳ್ಳಲಿದ್ದು, 120 ಆಟಗಾರರು ಸ್ಪರ್ಧೆ ನಡೆಸಲಿದ್ದಾರೆ. ಟೋಕಿಯೊ ಒಲಂಪಿಕ್ಸ್ ನಲ್ಲಿ ಕರ್ನಾಟಕರ ಇಬ್ಬರು ಆಟಗಾರ್ತಿಯರು ಪಾಲ್ಗೊಳ್ಳಲಿದ್ದು, ಅವರ ಮೇಲೆ ನಿರೀಕ್ಷೆ ಹೆಚ್ಚಿದೆ.
ಮೂಡಬಿದಿರಿ ಆಳ್ವಾಸ್ ಪ್ರತಿಷ್ಠಾನದ ಇಬ್ಬರು ವಿದ್ಯಾರ್ಥಿನಿಯರು ಟೋಕಿಯೊ ಒಲಂಪಿಕ್ಸ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಪಟುಗಳಾದ ಧನಲಕ್ಷ್ಮಿ ಮತ್ತು ಶುಭಾ ಒಲಿಂಪಿಕ್ಸ್ ಗೆ ಆಯ್ಕೆ ಮಾಡಲಾಗಿದೆ. ಇಬ್ಬರೂ 4×400 ಮಿಶ್ರ ರಿಲೇಯಲ್ಲಿ ದೇಶದ ತಂಡವನ್ನು ಪ್ರತಿನಿಧಿಸಲಿದ್ದಾರೆ.
ಇವರಿಬ್ಬರು 2016-17ನೇ ಶೈಕ್ಷಣಿಕ ವರ್ಷದಿಂದ ಆಳ್ವಾಸ್ ಶೈಕ್ಷಣಿಕ ಸಂಸ್ಥೆಯಿಂದ ಮಂಗಳೂರು ವಿಶ್ವವಿದ್ಯಾಲಯ ಮತ್ತು ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಕಾಲೇಜುಗಳನ್ನು ಪ್ರತಿನಿಧಿಸುತ್ತಿದ್ದರು.
ಕ್ರೀಡಾಪಟುಗಳಾದ ಧನಲಕ್ಷ್ಮಿ ಮತ್ತು ಶುಭ 2016 ರಿಂದ ನಮ್ಮ ಪ್ರತಿಷ್ಠಾನದ ವಿದ್ಯಾರ್ಥಿಗಳಾಗಿದ್ದಾರೆ. ನಮ್ಮ ಶಿಕ್ಷಣ ಪ್ರತಿಷ್ಠಾನವು ಪ್ರತಿ ಕ್ರೀಡಾಪಟುವಿಗೆ ಒಂದು ಲಕ್ಷ ರೂಪಾಯಿಗಳನ್ನು ನೀಡಲಿದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವಾ ಹೇಳಿದ್ದಾರೆ. ಟೋಕಿಯೊ ಒಲಿಂಪಿಕ್ಸ್ ಜುಲೈ 23 ರಿಂದ ಆಗಸ್ಟ್ 8 ರವರೆಗೆ ನಡೆಯಲಿದೆ.