ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ಇಬ್ಬರು ಬಾಂಗ್ಲಾದೇಶದ ಪ್ರಜೆಗಳು ಪತ್ತೆಯಾಗಿದ್ದಾರೆ. ಗಾರ್ಮೆಂಟ್ಸ್ ಮೇಲೆ ಡಿವೈಎಸ್ಪಿ ದಿನಕರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
15 ಶಂಕಿತ ಬಾಂಗ್ಲಾ ನುಸುಳುಕೋರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗದ ಕೋಟೆ ಮತ್ತು ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ. ಬಹುತೇಕರ ಬಳಿ ಪಶ್ಚಿಮ ಬಂಗಾಳದ ಆಧಾರ್ ಕಾರ್ಡ್ ಗಳು ಪತ್ತೆಯಾಗಿವೆ. ಚಿತ್ರದುರ್ಗ ಎಸ್ಪಿ ರಂಜಿತ್ ಬಂಡಾರು ನೇತೃತ್ವದಲ್ಲಿ ವಿಚಾರಣೆ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.