alex Certify BIG NEWS: ಹಬ್ಬದ ವೇಳೆಯೇ ದುರಂತ; ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಬ್ಬದ ವೇಳೆಯೇ ದುರಂತ; ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ದೀಪಾಳಿ ಹಬ್ಬದ ವೇಳೆಯೇ ದುರಂತವೊಂದು ಸಂಭವಿಸಿದೆ. ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಉತ್ತರ ತಾಲೂಕಿನ ಸಿದ್ದನಹೊಸಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿದ್ದು, ರಾಜೇಶ್ (45) ಹಾಗೂ ಹೆಗ್ಗಡದೇವನಪುರದ ಧನರಾಜ್ (24) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಶಂಕರ್, ಮಹೇಶ್ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...