alex Certify ಜಮೀನಿಗೆ ಹೋದಾಗಲೇ ಸಿಡಿಲು ಬಡಿದು ಸೋದರರಿಬ್ಬರು ಸಾವು: ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಮೀನಿಗೆ ಹೋದಾಗಲೇ ಸಿಡಿಲು ಬಡಿದು ಸೋದರರಿಬ್ಬರು ಸಾವು: ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ

ಶಿವಮೊಗ್ಗ: ಜಮೀನಿನಲ್ಲಿ ಸಿಡಿಲು ಬಡಿದು ಸಹೋದರರಿಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹುಣಸೇಕಟ್ಟೆ ಜಂಕ್ಷನ್ ಬಳಿ ನಿನ್ನೆ ರಾತ್ರಿ ಘಟನೆ ನಡೆದಿದೆ.

ಸಹೋದರರಾದ ವೀರ(32), ಸುರೇಶ್(30) ಮೃತಪಟ್ಟವರು ಎಂದು ಹೇಳಲಾಗಿದೆ. ಗದ್ದೆಯಲ್ಲಿ ಕಟಾವು ಮಾಡಿದ್ದ ಭತ್ತವನ್ನು ರಾಶಿ ಹಾಕಿದ್ದು, ಅದನ್ನು ಕಾಯಲು ಸಹೋದರರು ಹೋಗಿದ್ದರು. ಈ ವೇಳೆ ಸಿಡಲಿ ಬಡಿದು ಮೃತಪಟ್ಟಿದ್ದಾರೆ.

ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಭದ್ರಾವತಿ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಮೃತದೇ ರವಾನೆ ಮಾಡಲಾಗಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...