ಬೆಂಗಳೂರು: ಬೆಂಗಳೂರಿನಲ್ಲಿ ನಡೆದಿದ್ದ ಎರಡು ಕಾರುಗಳ ನಡುವೆ ಭೀಕರ ಅಪಘಾತದಲ್ಲಿ ಯುವತಿ ಸಜೀವದಹನಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಏಪ್ರಿಲ್ 22ರಂದು ಬೆಂಗಳೂರಿನ ಉತ್ತರ ತಾಲೂಕಿನ ಮಾದವಾರ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಕಾರುಗಳ ನಡಿವೆ ಡಿಕ್ಕಿ ರಭಸಕ್ಕೆ ಹೊತ್ತಿಕೊಂಡ ಬೆಂಕಿಯಲ್ಲಿ 16 ವರ್ಷದ ಯುವತಿ ಸಜೀವದಹನವಾಗಿದ್ದಳು, ಮೂವರು ಗಂಭೀರವಾಗಿ ಗಾಯಗೊಂಡಿದ್ದರು.
ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೂವರು ಗಾಯಾಳುಗಳು ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಮೃತರನ್ನು ಗುಜರಾತ್ ಮೂಲದ ಒಂದೇ ಕುಟುಂಬದ ಸುನೀತ್ (42), ನಮನ್ (20), ಮಯಾಂಕ್ (19) ಎಂದು ಗುರುತಿಸಲಾಗಿದೆ.
ಅಪಘಾತಕ್ಕೆ ಕಾರಣವಾಗಿದ್ದ ಬುಲೆರೋ ವಾಹನ ಚಾಲಕ ಇನ್ಶುರೆನ್ಸ್ ಹಣ ಕಟ್ಟದೆ ಗೂಗಲ್ ನಲ್ಲಿ ಸರ್ಚ್ ಪಡೆದು ಪೇಕ್ ನಂಬರ್ ಹಾಕಿದ್ದ ಎನ್ನಲಾಗಿದೆ. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.