alex Certify ತೆರೆದ ಹೊಂಡಕ್ಕೆ ಬಿದ್ದ ಜೀಪ್; ಇಬ್ಬರು ಸಾವು, 6 ಜನರ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೆರೆದ ಹೊಂಡಕ್ಕೆ ಬಿದ್ದ ಜೀಪ್; ಇಬ್ಬರು ಸಾವು, 6 ಜನರ ಸ್ಥಿತಿ ಗಂಭೀರ

ಬಳ್ಳಾರಿ: ಆಟೋ ಹಾಗೂ ಜೀಪ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದರ ಪರಿಣಾಮ ಇಬ್ಬರು ಸಾವನ್ನಪ್ಪಿ, 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಈ ಘಟನೆ ಸಂಡೂರು ತಾಲೂಕಿನ ವಡ್ಡು ಗ್ರಾಮದ ಹತ್ತಿರದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಆಟೋ ಹಾಗೂ ಜೀಪ್ ಪರಸ್ಪರ ಡಿಕ್ಕಿ ಹೊಡೆದ ರಭಸಕ್ಕೆ ಜೀಪ್ ತೆರೆದ ಹೊಂಡದಲ್ಲಿ ಬಿದ್ದಿದೆ. ಹೀಗಾಗಿ ಜೀಪ್ ನಲ್ಲಿದ್ದ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ವಡ್ಡು ಗ್ರಾಮದ ಅಗಸರ ಅಳ್ಳಪ್ಪ(68) ಹಾಗೂ ಖಾಸಗಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುರ್ಜಿತ್ ಸಿಂಗ್ (51) ಸಾವನ್ನಪ್ಪಿದ ದುರ್ದೈವಿಗಳು ಎನ್ನಲಾಗಿದೆ. ಆಟೋದಲ್ಲಿದ್ದ ಐವರು ಗಾಯಗೊಂಡಿದ್ದು ಅವರನ್ನು ಬಳ್ಳಾರಿಯ ವಿಮ್ಸ್ ಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹೊಂಡದಿಂದ ಚಾಲಕ, ಮತ್ತೊಬ್ಬರನ್ನು ಹೊರ ತೆಗೆದು ಉಳಿಸಿಕೊಳ್ಳಲು ಪ್ರಯತ್ನಪಟ್ಟರು. ಆದರೆ, ಅವರ ಪ್ರಯತ್ನ ವಿಫಲವಾಯಿತು. ಜೀಪ್ ನಲ್ಲಿದ್ದ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ತೋರಣಗಲ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...