
ವಿರುದುನಗರ(ತಮಿಳುನಾಡು): ತಮಿಳುನಾಡಿನ ವಿರುದುನಗರ ಜಿಲ್ಲೆಯ ಶಿವಕಾಶಿಯಲ್ಲಿರುವ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಶಿವಕಾಶಿಯ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಈ ವರ್ಷದ ಆರಂಭದಲ್ಲಿ ಶಿವಕಾಶಿಯಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಒಬ್ಬರು ಸಾವನ್ನಪ್ಪಿದ್ದರು.