ತಮಿಳುನಾಡಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಸ್ಸಿನ ಚಕ್ರಕ್ಕೆ ಸಿಲುಕಿ ಇಬ್ಬರು ದ್ವಿಚಕ್ರ ವಾಹನ ಸವಾರರು ಅಸುನೀಗಿದ್ದಾರೆ.
ಕೊಯಮತ್ತೂರು ಜಿಲ್ಲೆಯ ಸೆಲ್ವಪುರಂನಲ್ಲಿ ಈ ಅಪಘಾತ ಸಂಭವಿಸಿದ್ದು, ರಸ್ತೆಯ ಪಕ್ಕದಲ್ಲಿನ ಅಂಗಡಿಯಲ್ಲಿ ಅಳವಡಿಸಲಾಗಿರುವ ಸಿಸಿ ಟಿವಿ ಕ್ಯಾಮೆರಾದಲ್ಲಿ ಈ ಅಪಘಾತದ ದೃಶ್ಯಗಳು ಸೆರೆಯಾಗಿವೆ.
19 ವರ್ಷದ ಮನೋಜ್ ಮತ್ತು ಆರತಿ ಎಂಬುವರು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದರು. ಸೆಲ್ವಪುರಂನಲ್ಲಿ ಮುಂದೆ ಹೋಗುತ್ತಿದ್ದ ಸರ್ಕಾರಿ ಬಸ್ ಅನ್ನು ಎಡಬದಿಯಿಂದ ಓವರ್ ಟೇಕ್ ಮಾಡಲು ಮನೋಜ್ ಪ್ರಯತ್ನಿಸಿದ್ದಾನೆ. ಆದರೆ, ರಸ್ತೆ ಪಕ್ಕದಲ್ಲಿದ್ದ ಕಲ್ಲಿನ ಮೇಲೆ ಬೈಕ್ ಹರಿದ ಪರಿಣಾಮ ಬೈಕ್ ಸಹಿತ ಇಬ್ಬರೂ ಬಸ್ಸಿನ ಹಿಂಬದಿ ಚಕ್ರದಡಿಗೆ ಸಿಲುಕಿದ್ದಾರೆ. ಅವರ ತಲೆ ಮೇಲೆ ಬಸ್ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
BIG NEWS: ರಾಜ್ಯಸಭಾ ಚುನಾವಣೆ; ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ಗೆಲುವು; ಅಧಿಕೃತ ಘೋಷಣೆಯೊಂದೇ ಬಾಕಿ
ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ಶವಗಳನ್ನು ವಾರಸುದಾರರಿಗೆ ಹಸ್ತಾಂತರ ಮಾಡಿದರು. ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ಬಸ್ ಚಾಲಕನನ್ನು ಬಂಧಿಸಿದ್ದಾರೆ.