ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಎನ್ಕೌಂಟರ್ನಲ್ಲಿ ಇಬ್ಬರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಹತರಾಗಿದ್ದಾರೆ.
ಉಗ್ರರನ್ನು ರೆಯಾಜ್ ದಾರ್ ಮತ್ತು ಖಾಲಿದ್ ಎಂದು ಗುರುತಿಸಲಾಗಿದೆ. ಅವರಲ್ಲಿ ಒಬ್ಬರು ಉನ್ನತ ಜೆಎಂ ಕಮಾಂಡರ್ ಎಂದು ಮೂಲಗಳು ತಿಳಿಸಿವೆ.
ಕಾಶ್ಮೀರ ವಲಯ ಪೊಲೀಸರು ಪುಲ್ವಾಮಾದ ಲಾರೋ-ಪರಿಗಮ್ ಪ್ರದೇಶದಲ್ಲಿ ಎನ್ಕೌಂಟರ್ ಪ್ರಾರಂಭವಾಗಿದೆ. ಪೊಲೀಸ್ ಮತ್ತು ಭದ್ರತಾ ಪಡೆಗಳು ಕಾರ್ಯದಲ್ಲಿವೆ ಎಂದು ತಿಳಿಸಿದ್ದು, ಕಾರ್ಯಾಚರಣೆ ಮುಂದುವರೆದು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.