alex Certify ಪೊಲೀಸರಿಂದ ಭರ್ಜರಿ ಬೇಟೆ: ಜೈಷ್ ಸಂಘಟನೆಯ ಇಬ್ಬರು ಉಗ್ರರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರಿಂದ ಭರ್ಜರಿ ಬೇಟೆ: ಜೈಷ್ ಸಂಘಟನೆಯ ಇಬ್ಬರು ಉಗ್ರರು ಅರೆಸ್ಟ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದೆ.

ಉತ್ತರ ಕಾಶ್ಮೀರ ಬಂಡೀಪೋರಾ ಎಸ್ಎಸ್ಪಿ ರಾಹುಲ್ ಮಲಿಕ್ ಈ ಬಗ್ಗೆ ಮಾಹಿತಿ ನೀಡಿ, ಉತ್ತರ ಕಾಶ್ಮೀರದಲ್ಲಿ ಜೈಷ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರಿಂದ ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಾಗಿದೆ. ಯುವಕರನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಸೆಳೆಯುವ ಪ್ರಯತ್ನಗಳು ಈ ಭಾಗದಲ್ಲಿ ನಡೆಯುತ್ತಿವೆ ಎಂದು ಹೇಳಿದ್ದಾರೆ.

ಮಜೀದ್ ಖಾನ್, ಶೌಕತ್ ಅಹಮದ್ ಎಂಬುವರನ್ನು ಬಂಧಿಸಲಾಗಿದೆ. ಇವರು ಭಯೋತ್ಪಾದಕರಿಗೆ ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುತ್ತಿದ್ದರು. ಅಲ್ಲದೆ, ಯುವಕರನ್ನು ಭಯೋತ್ಪಾದನೆಯತ್ತ ಸೆಳೆದು ನೇಮಕಾತಿ ಮಾಡುತ್ತಿದ್ದರು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...