alex Certify ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಇಬ್ಬರು ಬಲಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಇಬ್ಬರು ಬಲಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

ಬೆಂಗಳೂರು : ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಗೆ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದೇ ಮಳೆಯಾಗುತ್ತಿದೆ. ಮಳೆ ಸಂಬಂಧಿ ಅವಘಡಗಳಿಂದ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.  ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಅಧಿವೇಶನ ಮುಗಿದ ಬಳಿಕ ನಾಳೆ ಸಂಜೆ ಉಡುಪಿ ಜಿಲ್ಲೆಗೆ ಭೇಟಿ ನೀಡುತ್ತೇನೆ. ನಾಳೆ ಸಂಜೆಯೇ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಹಾರ ಕ್ರಮಗಳ ಬಗ್ಗೆ ಸೂಚನೆ ನೀಡುತ್ತೇನೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...