alex Certify ಹೊಸ ವರ್ಷದ ದಿನವೇ ಉಗ್ರರ ಅಟ್ಟಹಾಸ: ರಜೌರಿ ರಾಮಮಂದಿರ ಬಳಿ ಗುಂಡಿನ ದಾಳಿ; ಇಬ್ಬರು ಸಾವು, 6 ಜನರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ವರ್ಷದ ದಿನವೇ ಉಗ್ರರ ಅಟ್ಟಹಾಸ: ರಜೌರಿ ರಾಮಮಂದಿರ ಬಳಿ ಗುಂಡಿನ ದಾಳಿ; ಇಬ್ಬರು ಸಾವು, 6 ಜನರಿಗೆ ಗಾಯ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಆರು ಜನರು ಗಾಯಗೊಂಡಿದ್ದಾರೆ. ರಾಜೌರಿಯ ಧಂಗ್ರಿ ಗ್ರಾಮದ ರಾಮ ಮಂದಿರದ ಬಳಿ ಶಂಕಿತ ಭಯೋತ್ಪಾದಕ ದಾಳಿ ನಡೆದಿದೆ.

ಬಂದೂಕು ಹಿಡಿದ ಕೆಲವರು ಕಾರ್ ನಲ್ಲಿ ಬಂದು ಆ ಪ್ರದೇಶದಲ್ಲಿದ್ದ ಜನರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಶೂಟೌಟ್ ನಂತರ, ಅವರು ಕಾರ್ ನಲ್ಲಿ ಪರಾರಿಯಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಉಗ್ರರ ಸದೆಬಡಿಯಲು ಕಾರ್ಯಾಚರಣೆ ನಡೆಸಲಾಗಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...