ಬೆಳಗಾವಿ: ದೇವಸ್ಥಾನ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದಲ್ಲಿ ಘಟನೆ ನಡೆದಿದೆ.
ಕಲಾವತಿ ಬೀದರವಾಡಿ(37), ಸವಿತಾ ಒಂಟಿ(36) ಮೃತಪಟ್ಟವರು ಎಂದು ಹೇಳಲಾಗಿದೆ. ವಾಲ್ಮೀಕಿ ದೇವಸ್ಥಾನ ಸ್ವಚ್ಛಗೊಳಿಸಿ ಶಟರ್ ಎಳೆಯುವಾಗ ದುರಂತ ಸಂಭವಿಸಿದೆ. ಮೃತ ಕಲಾವತಿ ಪತಿ ಮಾರುತಿ ಬೀದರವಾಡಿಗೆ ಗಂಭೀರ ಗಾಯವಾಗಿದ್ದು, ಬೆಳಗಾವಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.