ಉಡುಪಿ: ಬ್ರಹ್ಮಾವರ ಠಾಣೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀರನ್ನು ಅಮಾನತುಗೊಳಿಸಲಾಗಿದೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮಧು ಹಾಗೂ ಕಾನ್ಸ್ ಟೇಬಲ್ ಸುಜಾತಾ ಅಮಾನತುಗೊಂಡವರು. ಇಬ್ಬರನ್ನು ಅಮಾನತುಗೊಳಿಸಿ ಉಡುಪಿ ಎಸ್ ಪಿ ಅರುಣ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಆರೋಪಿಯನ್ನು ಬಂಧಿಸುವಾಗ ಸುಪ್ರೀಂ ಕೋರ್ಟ್ ನಿರ್ದೇಶನ ಸರಿಯಾಗಿ ಪಾಲಿಸಿಲ್ಲ. ಬಂಧನದ ವೇಳೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ.
ಮಹಿಳೆಯನ್ನು ಚುಡಾಯಿಸಿದಕ್ಕೆ ಆರೋಪಿ ಬಿಜು ಮೋಹನ್ ಎಂಬಾತನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದರು. ಆದರೆ ಕಸ್ಟಡಿಯಲ್ಲಿದ್ದ ಬಿಜು ಮೋಹನ್ ಅ.10ರಂದು ಇದ್ದಕ್ಕಿದ್ದಂತೆ ಸಾವನ್ನಪ್ಪಿದ್ದ. ಈ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.