alex Certify ಡ್ರಾಪ್ ಕೊಡುವ ನೆಪದಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರಾಪ್ ಕೊಡುವ ನೆಪದಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಅರೆಸ್ಟ್

ಚಿಕ್ಕಬಳ್ಳಾಪುರ: ಡ್ರಾಪ್ ಕೊಡುವುದಾಗಿ ಕರೆದೊಯ್ದ ಕಿರಾತಕ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿ ಶ್ರೀಕಾಂತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಿದ್ಯಾರ್ಥಿನಿಯರು ವಾಪಾಸ್ ಆಗುತ್ತಿದ್ದರು. ಈ ವೇಳೆ ಚಿಕ್ಕಬಳ್ಳಾಪುರಕ್ಕೆ ಡ್ರಾಪ್ ಕೊಡುವುದಾಗಿ ಹೇಳಿ ಆರೋಪಿ, ಇಬ್ಬರು ವಿದ್ಯಾರ್ಥಿನಿಯರನ್ನು ಬೈಕ್ ಗೆ ಹತ್ತಿಸಿಕೊಂಡಿದ್ದ. ಈ ವೇಳೆ ಹೆದ್ದಾರಿ ಮಾರ್ಗವನ್ನು ಬದಲಿಸಿ ಅರಣ್ಯಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.

ಈ ವೇಳೆ ಇಬ್ಬರು ವಿದ್ಯಾರ್ಥಿನಿಯರು ಆತನಿಂದ ತಪ್ಪಿಸಿಕೊಂಡು 112 ಸಂಖ್ಯೆಗೆ ಕರೆ ಮಾಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಲೊಕೇಶನ್ ಆಧಾರದ ಮೇಲೆ ಸ್ಥಳಕ್ಕೆ ಆಗಮಿಸಿ ಇಬ್ಬರು ವಿದ್ಯಾರ್ಥಿನಿಯರನ್ನು ರಕ್ಷಿಸಿದ್ದಾರೆ. ಆರೋಪಿ ಶ್ರೀಕಾಂತ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...