alex Certify ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು, 30ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು, 30ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

ತುಮಕೂರು: ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು, ಮೂವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದಿದೆ.

ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ ನೀಡಲಾಗಿದ್ದ ಮೊಸರನ್ನ ತಿಂದ ನಂತರ ರಾತ್ರಿ ವೇಳೆಗೆ ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಕೂಡಲೇ ಪೋಷಕರು ಕುಣಿಗಲ್ ತಾಲೂಕಿನ ಹಿಪ್ಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಕ್ಕಳನ್ನು ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ 19 ಮಕ್ಕಳನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಲೂಕು ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...