ಜಮ್ಮು ಮತ್ತು ಕಾಶ್ಮೀರದಲ್ಲಿ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ. ಈ ವೇಳೆ ಅಪಾರ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ(ಎಲ್‌ಒಸಿ) ಉದ್ದಕ್ಕೂ ನೌಶೇರಾ ಪಟ್ಟಣದ ಲ್ಯಾಮ್ ಸಾಮಾನ್ಯ ಪ್ರದೇಶದಲ್ಲಿ ಭಾನುವಾರ ಮತ್ತು ಸೋಮವಾರದ ಮಧ್ಯರಾತ್ರಿಯ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.
ಕ್ರಾಸ್ ಫೈರ್ ನಲ್ಲಿ ಕನಿಷ್ಠ ಒಂದೆರಡು ಭಯೋತ್ಪಾದಕರು ಗಾಯಗೊಂಡಿರುವ ಶಂಕೆ ಇರುವುದರಿಂದ ಭಾರಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಗುಪ್ತಚರ ಮಾಹಿತಿ ಮತ್ತು ಜಮ್ಮು ಮತ್ತು ಕಾಶ್ಮೀರ ಪೋಲೀಸ್(JKP) ಯಿಂದ ಸಂಭಾವ್ಯ ಒಳನುಸುಳುವಿಕೆ ಪ್ರಯತ್ನದ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆಯು ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಭದ್ರತಾ ಪಡೆಗಳು ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರ ಸಂಗ್ರಹ ವಶಪಡಿಸಿಕೊಂಡಿವೆ. ಇಬ್ಬರು ಭಯೋತ್ಪಾದಕರನ್ನು ತಟಸ್ಥಗೊಳಿಸಲಾಗಿದೆ. ಎರಡು AK-47 ಮತ್ತು ಒಂದು ಪಿಸ್ತೂಲ್ ಸೇರಿದಂತೆ ದೊಡ್ಡ ಪ್ರಮಾಣದ ಯುದ್ಧ ಸಾಮಗ್ರಿ ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ” ಎಂದು ಭಾರತೀಯ ಸೇನೆ ತಿಳಿಸಿದೆ.