ಎರಡು ಟ್ರಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹೊತ್ತಿಕೊಂಡ ಬೆಂಕಿಗೆ ಇಬ್ಬರು ಸಜೀವದಹನವಾಗಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ ಹಮೀರ್ ಪುರ ಜಿಲ್ಲೆಯ ಸುಮೇರ್ ಪುರದ ರಾಷ್ಟ್ರೀಯ ಹೆದ್ದಾರಿ 34ರಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಒಂದು ಟ್ರಕ್ ನಲ್ಲಿದ್ದ ಇಬ್ಬರು ಸಜೀವದಹನವಾಗಿದ್ದಾರೆ.
ಟ್ರಕ್ ಚಾಲಕ ಹಾಗೂ ಕ್ಲೀನರ್ ಮೃತಪಟ್ಟಿದ್ದಾರೆ ಎಂದು ಪೊಲಿಸರು ಮಾಹಿತಿ ನೀಡಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಇನ್ನೊಂದು ಟ್ರಕ್ ನಲ್ಲಿವರು ಸ್ಥಳದಿಂದ ಪರಾರಿಯಾಗಿದ್ದಾರೆ. ಎರಡೂ ಟ್ರಕ್ ಗಳ ಮಾಲೀಕರನ್ನು ಸಂಪರ್ಕಿಸುವ ಪ್ರಯತ್ನ ನಡೆದಿದೆ ಎಂದು ತಿಳಿಸಿದ್ದಾರೆ.