alex Certify ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವತಿಯರು…! ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವತಿಯರು…! ವಿಡಿಯೋ ವೈರಲ್

ಉತ್ತರ ಪ್ರದೇಶದ ಲಕ್ನೋದಲ್ಲಿನ ಅನ್‌ಪ್ಲಗ್ಡ್ ಕೆಫೆಯ ಹೊರಗೆ ಮದ್ಯದ ಅಮಲಿನಲ್ಲಿ ಇಬ್ಬರು ಯುವತಿಯರು ತಡರಾತ್ರಿ ವ್ಯಕ್ತಿಯೊಬ್ಬನನ್ನು ಥಳಿಸಿದ ಘಟನೆ ನಡೆದಿದೆ.

ಕಟ್ಟಡದ 15ನೇ ಮಹಡಿಯಲ್ಲಿರುವ ಪಬ್‌ನ ಹೊರಗೆ ಯುವತಿ ಮತ್ತು ಪುರುಷನೊಬ್ಬ ಪರಸ್ಪರ ಹೊಡೆದಾಡುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.

ಪ್ರತ್ಯಕ್ಷದರ್ಶಿಗಳು ತಮ್ಮ ಮೊಬೈಲ್‌ನಲ್ಲಿ ಗಲಾಟೆಯನ್ನು ರೆಕಾರ್ಡ್ ಮಾಡಿದ್ದು, ಆ ಯುವತಿ ವ್ಯಕ್ತಿಯನ್ನು ಥಳಿಸುತ್ತಿರುವುದನ್ನು ಕಾಣಬಹುದಾಗಿದೆ.

ಪಬ್‌ನ ಪ್ರವೇಶ ದ್ವಾರದಲ್ಲಿ ಇರಿಸಲಾಗಿದ್ದ ಹೂವಿನ ಕುಂಡದಿಂದಲೂ ಆಕೆ ವ್ಯಕ್ತಿ ಮೇಲೆ ಹಲ್ಲೆ ನಡೆಸಿದಳು.

ಕೆಲಕಾಲ ಮಾತಿನ ಚಕಮಕಿ ಮುಂದುವರಿದಿದ್ದು, ಅದನ್ನು ಬೌನ್ಸರ್‌ಗಳು ಮತ್ತು ಪಬ್‌ನ ಇತರ ನಿರ್ವಾಹಕರು ತಡೆದಿದ್ದಾರೆ.

ವಿಡಿಯೋದಲ್ಲಿದ್ದ ಇಬ್ಬರು ಯುವತಿಯರನ್ನು ಪೊಲೀಸರು ನಂತರ ಗುರುತಿಸಿ ಬಂಧಿಸಿದ್ದಾರೆ. ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ, ಆದರೆ ಥಳಿತಕ್ಕೊಳಗಾದ ವ್ಯಕ್ತಿ ದೂರು ದಾಖಲಿಸಲು ಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...