
ಮನೆ ಮುಂದೆ ಆಟವಾಡುತ್ತಿದ್ದ 8 ವರ್ಷದ ಬಾಲಕಿಯನ್ನು ಎಳೆದೊಯ್ದು ದುರುಳರು ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿಯಲ್ಲಿ ನಡೆದಿದೆ.
ಕುಡಿದ ನಶೆಯಲ್ಲಿದ್ದ ಇಬ್ಬರು ದುಷ್ಕರ್ಮಿಗಳು 8 ವರ್ಷದ ಬಾಲಕಿಯನ್ನು ಪೊದೆಗೆ ಎಳೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಬಾಲಕಿ ಕಿರುಚಾಡುತ್ತಿದ್ದಂತೆ ಸ್ಥಳೀಯರು ಓಡಿ ಬಂದು ಬಾಲಕಿಯನ್ನು ರಕ್ಷಿಸಿದ್ದಾರೆ. ಓರ್ವ ಆರೋಪಿಯನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.