ಕಲಬುರಗಿ : ರಿವಾಲ್ವರ್ ಹಿಡಿದು ರೀಲ್ಸ್ ಮಾಡಿ ಫೋಸ್ ಕೊಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ಇಬ್ಬರು ಯುವಕರು ರಿವಾಲ್ವರ್ ಹಿಡಿದು ರೀಲ್ಸ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುತ್ತಿದ್ದರು. ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಇಬ್ಬರಿಗೆ ಬಿಸಿ ಮುಟ್ಟಿಸಿದ್ದಾರೆ.
ಬಂಧಿತರನ್ನು ಅಫ್ಜಜಲಶೇಖ್ (27) ದೀಪಕ್ ಚೌಹಾಣ್ ( 23) ಎಂದು ಗುರುತಿಸಲಾಗಿದೆ. ಇಬ್ಬರು ಯುವಕರು ರಿವಾಲ್ವರ್ ಹಿಡಿದು ರೀಲ್ಸ್ ಮಾಡಿ ನಂತರ ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುತ್ತಿದ್ದರು. ನಡುರಸ್ತೆಯಲ್ಲಿ ರಿವಾಲ್ವರ್ ಹಿಡಿದು ತಿರುಗುತ್ತಿದ್ದ ಯುವಕರನ್ನು ಕಂಡು ನಾಗರಿಕರು ಆತಂಕಕ್ಕೊಳಗಾಗಿದ್ದರು.