alex Certify BIG NEWS: ಟೈರ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; ಇಬ್ಬರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟೈರ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; ಇಬ್ಬರು ದುರ್ಮರಣ

ಲಖನೌ: ಟೈರ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.

ಮೀರತ್ ನ ವನ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಖಾನೆಯಲ್ಲಿ ಟೈರ್ ಕರಗಿಸುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಬಾಯ್ಲರ್ ಸ್ಫೋಟಕ್ಕೆ ನಿಖರ ಕರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಎಸ್ ಪಿ ದೇಹತ್ ಕಮಲೇಶ್ ಬಹದ್ದೂರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...