alex Certify BREAKING: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ಯು.ಬಿ. ಬಣಕಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ಯು.ಬಿ. ಬಣಕಾರ್

ಬೆಂಗಳೂರು: ಮಾಜಿ ಶಾಸಕ ಯು.ಬಿ. ಬಣಕಾರ್ ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ ಅವರು, ಮಾಜಿ ಶಾಸಕ ಯು.ಬಿ. ಬಣಕಾರ್ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಹಲವು ವರ್ಷಗಳಿಂದ ಬಿಜೆಪಿಯಲ್ಲಿದ್ದ ಬಣಕಾರ ಅಲ್ಲಿನ ನಡವಳಿಕೆಗೆ ಬೇಸತ್ತು ಕಾಂಗ್ರೆಸ್ ಗೆ ಬಂದಿದ್ದಾರೆ. ಯಾವುದೇ ಒತ್ತಡ ಹಾಕದೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದು, ಅವರನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಖಾಲಿಯಾಗಿದೆ ಎಂದು ಹೇಳುತ್ತಿದ್ದರು. ಪಕ್ಷಕ್ಕೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಬಿಜೆಪಿ ನಾಯಕ ಬಣಕಾರ್ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದರು.

ಕಾಂಗ್ರೆಸ್‌ ತತ್ವ ಹಾಗೂ ಸಿದ್ಧಾಂತಗಳ ಮೇಲೆ ವಿಶ್ವಾಸವಿಟ್ಟು ಮಾಜಿ ಶಾಸಕ ಯುಬಿ ಬಣಕಾರ್‌ ಸೇರಿದಂತೆ ಹಲವರು ಪಕ್ಷ ಸೇರ್ಪಡೆಗೊಂಡಿದ್ದಾರೆ. ಪಕ್ಷ ಬಲವರ್ಧನೆಗೆ ಕೈ ಜೋಡಿಸುತ್ತಿರುವ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದ್ದೇವೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...