
ಬೆಂಗಳೂರು: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಯು.ಬಿ. ಬಣಕಾರ ರಾಜೀನಾಮೆ ನೀಡಿದ್ದಾರೆ. ಯಾರೇ ಮನವೊಲಿಸಿದರೂ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಅವರು ಹೇಳಿದ್ದಾರೆ.
ನನ್ನ ಸಮಸ್ಯೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಗೊತ್ತಿದೆ. ಮುಖ್ಯಮಂತ್ರಿ ನಿವಾಸಕ್ಕೆ ಹೋದರೆ ಬಹಳ ಬ್ಯುಸಿ ಇರುತ್ತಾರೆ. ಈಗ ಯಡಿಯೂರಪ್ಪ ಅವರನ್ನು ಭೇಟಿ ಮಾಡುವ ಅವಶ್ಯಕತೆ ಇಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕೆಂದು ಬಿ.ಸಿ. ಪಾಟೀಲ್ ಅವರಿಗೆ ಸಹಕಾರ ನೀಡಿದ್ದೆ. ಹಿರೇಕೆರೂರಿನಲ್ಲಿ ಬಿ.ಸಿ. ಪಾಟೀಲ್ ಅವರನ್ನು ಗೆಲ್ಲಿಸುವ ಕೆಲಸ ಮಾಡಿದ್ದೇವೆ. ಆದರೆ, ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೇನೆ. ನನ್ನನ್ನು ದೂರ ಇಡುವ ಪ್ರಯತ್ನ ನಡೆದಿದೆ. ಕಾರ್ಯಕರ್ತರ ಜೊತೆ ಚರ್ಚಿಸಿ ತೀರ್ಮಾನ ಕೈಗೊಂಡಿದ್ದೇನೆ. ನಾನು ಆರು ತಿಂಗಳ ಹಿಂದೆಯೇ ಬಿಜೆಪಿಗೆ ರಾಜೀನಾಮೆ ಕೊಡಬೇಕಿತ್ತು ಎಂದು ಹೇಳಿದ್ದಾರೆ.