
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಉಬೆರ್ ಚಾಲಕನೊಬ್ಬ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ.
ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮಹಿಳೆ ಕ್ಯಾಬ್ ಬುಕ್ ಮಾಡಿದ್ದರು. ಮಹಿಳೆ ಬುಕ್ ಮಾಡಿದ್ದ ಸ್ಥಳಕ್ಕೆ ಮತ್ತೊಂದು ಕ್ಯಾಬ್ ಬಂದಿದೆ. ಈ ವೇಳೆ ಕ್ಯಾಬ್ ಹತ್ತಿ ಕುಳಿತಿದ್ದ ಮಹಿಳೆ ಮತ್ತು ಆಕೆಯ ಮಗನಿಗೆ ಬೇರೆ ಕ್ಯಾಬ್ ಎಂದು ಗೊತ್ತಾಗಿ ಇಳಿಯಲು ಯತ್ನಿಸಿದ್ದಾರೆ. ಈ ವೇಳೆ ಕಾರ್ ಚಲಾಯಿಸಲು ಚಾಲಕ ಮುಂದಾಗಿದ್ದಾನೆ. ಬಳಿಕ ದಿಢೀರನೆ ಕ್ಯಾಬ್ ನಿಲ್ಲಿಸಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾನೆ.
ಕೂಡಲೇ ಸ್ಥಳಕ್ಕೆ ಬಂದ ಸ್ಥಳೀಯರು ಮಹಿಳೆಯನ್ನು ರಕ್ಷಿಸಿದ್ದಾರೆ. ಘಟನೆಯ ದೃಶ್ಯ ಅಪಾರ್ಟ್ ಮೆಂಟ್ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಭೋಗನಹಳ್ಳಿಯಲ್ಲಿ ಘಟನೆ ನಡೆದಿದೆ.