ನವದೆಹಲಿ: ಕೇಂದ್ರ ಸರ್ಕಾರ ಸಮಾನ ನಾಗರಿಕ ಸಂಹಿತೆ ಜಾರಿಗೆ ಸಿದ್ಧತೆ ನಡೆಸಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ.
2024ರ ಸಾರ್ವತ್ರಿಕ ಚುನಾವಣೆ ಮೇಲೆ ಕಣ್ಣಿಟ್ಟ ಕೇಂದ್ರ ಸರ್ಕಾರ ಮುಂದಿನ ಮುಂಗಾರು ಸಂಸತ್ ಅಧಿವೇಶನದಲ್ಲಿ ಮಹತ್ವಾಕಾಂಕ್ಷಿಯ ಸಮಾನ ನಾಗರಿಕ ಸಂಹಿತೆ ವಿಧೇಯಕ ಮಂಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ನಮ್ಮ ಸರ್ಕಾರ ಸಮಾನ ನಾಗರಿಕ ಸಂಹಿತೆ ಜಾರಿಗೆ ಬದ್ಧವಾಗಿದ್ದು, ಅದಕ್ಕೆ ಸೂಕ್ತ ಸಮಯ ಬರಬೇಕು. ಎಲ್ಲಾ ಪ್ರಜಾಸತ್ತಾತ್ಮಕ ಪ್ರಕ್ರಿಯೆ ಅನುಸರಿಸಿ ಸಮಾನ ನಾಗರೀಕ ಸಂಹಿತೆ ಜಾರಿಗೊಳಿಸುವುದಾಗಿ ಕಳೆದ ವರ್ಷ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಫೆಬ್ರವರಿ 2 ರಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ರಾಜ್ಯಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಸಿದ್ದತೆ ಬಗ್ಗೆ ಮಾಹಿತಿ ನೀಡಿದ್ದರು.
2024ರ ಚುನಾವಣೆಗೆ ಸಮಾನ ನಾಗರಿಕ ಸಂಹಿತೆಯನ್ನು ಪ್ರಮುಖ ಚುನಾವಣಾ ಅಸ್ತ್ರವಾಗಿ ಬಿಜೆಪಿ ಬಳಸಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.