
ಬೆಂಗಳೂರು: ರಾಜ್ಯದಲ್ಲಿಯೂ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶೀಘ್ರದಲ್ಲಿಯೇ ರಾಜ್ಯದಲ್ಲಿ ಏಕರೂಪ ನಾಗರಿಕ ಸಮಿತಿ ಜಾರಿ ಬಗ್ಗೆ ದೃಢ ನಿರ್ಧಾರ ಕೈಗೊಳ್ಳುವುದಾಗಿ ಶಿವಮೊಗ್ಗದಲ್ಲಿ ರಾಜ್ಯ ಬಿಜೆಪಿ ಹಮ್ಮಿಕೊಂಡಿದ್ದ ಪ್ರಶಿಕ್ಷಣ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ತಿಳಿಸಿದ್ದಾರೆ.
ಎಲ್ಲಾ ಕಡೆಗಳಿಂದಲೂ ಏಕರೂಪ ನಾಗರಿಕ ಸಂಹಿತೆ ಜಾರಿ ಬಗ್ಗೆ ಚರ್ಚೆ ಆಗುತ್ತಿದ್ದು, ಸರ್ಕಾರ ಗಂಭೀರವಾಗಿ ಪರಿಗಣಿಸಿ ಜಾರಿಗೆ ತರಲು ಗಮನ ಹರಿಸಿದೆ. ಕಾಯ್ದೆ ಎಲ್ಲಾ ಸಮಾಜ ಮತ್ತು ಧರ್ಮದವರಲ್ಲಿ ಸಮಾನತೆಯನ್ನು ತರುತ್ತದೆ ಎಂದು ಹೇಳಿದ್ದಾರೆ.