ಮೈಸೂರು : ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆಗೆ ಹೈಕೋರ್ಟ್ ಅನುಮತಿ ನೀಡಿದೆ.
ಮೈಸೂರು ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ಕೆಲವು ನಿರ್ದೇಶಗಳನ್ನು ನೀಡುವ ಮೂಲಕ ಪ್ರತಿಭಟನೆ ನಡೆಸಲು ಕೋರ್ಟ್ ಅನುಮತಿ ನೀಡಿದೆ. ಮೈಸೂರಿನ ಫುಟ್ ಬಾಲ್ ಮೈದಾನದಲ್ಲಿ ಪ್ರತಿಭಟನೆಗೆ ಕೋರ್ಟ್ ಅವಕಾಶ ನೀಡಿದೆ. 1 ಲಕ್ಷ ರೂ ಬಾಂಡ್ ನೀಡಬೇಕು, ಪ್ರತಿಭಟನೆ ಶಾಂತಿಯುತವಾಗಿರಬೇಕು. ಶಾಂತಿಭಂಗವಾಗುವ ಪ್ರಚೋದನಕಾರಿ ಹೇಳಿಕೆ ನೀಡಬಾರದು, ಮಧ್ಯಾಹ್ನ 3:30 ರಿಂದ ಪ್ರತಿಭಟನೆ ಆರಂಭಿಸಬೇಕು, ಪ್ರತಿಭಟನೆಯ ಸಂಪೂರ್ಣ ಚಿತ್ರೀಕರಣ ಮಾಡಬೇಕು,ಅಹಿತಕರ ಘಟನೆ ನಡೆದರೆ ಅರ್ಜಿದಾತರರೇ ನೇರಹೊಣೆ ಎಂದು ಹೈಕೋರ್ಟ್ ಸೂಚನೆ ನೀಡಿದೆ.
ಫೆಬ್ರವರಿ 10 ರಂದು ಅವಹೇಳನಕಾರಿ ಪೋಸ್ಟ್ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಉದಯಗಿರಿ ಪೊಲೀಸ್ ಠಾಣೆ ಮೇಲೆ ಅನ್ಯಕೋಮಿನ ಗುಂಪು ಕಲ್ಲು ತೂರಾಟ ನಡೆಸಿತ್ತು. ಘಟನೆಯಲ್ಲಿ 14 ಮಂದಿ ಪೊಲೀಸರು ಗಾಯಗೊಂಡಿದ್ದರು ಹಾಗೂ ಹಲವು ಪೊಲೀಸ್ ವಾಹನಗಳು ಜಖಂ ಆಗಿದ್ದವು. ಪೊಲೀಸರು ಹಲವು ಎಫ್ ಐ ಆರ್ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದರು.