ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಶಾಂತಿನಗರದ ನಿವಾಸಿಗಳಾದ ಸುಹೇಲ್ ರಹಿಲ್ ಪಾಶಾ, ಅಯಾನ್ ಬಿನ್ ಜಬೀವುಲ್ಲಾ, ಗೌಸಿಯಾ ನಗರದ ಸೈಯದ್ ಸಾದಿಕ್ ಬಿನ್ ನವೀದ್, ಸತ್ಯನಗರದ ಇಜಾಜ್ ಬಿನ್ ಅಬ್ದುಲ್ ವಾಜೀದ್, ರಾಜೀವ್ ನಗರದ ಸಾದಿಕ್ ಪಾಶಾ @ ಖಾಲಿದ್ ಪಾಷಾ ಸೇರಿದಂತೆ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತಷ್ಟು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೂ ಮುನ್ನ ಮೌಲ್ವಿಯೊಬ್ಬರು ಪ್ರಚೋದನಕಾರಿ ಭಾಷಣ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಮುಫ್ತಿ ಮುಷ್ತಾಕ್ ಮಕ್ಬೋಲಿ ಎಂಬ ಮೌಲ್ವಿ ಪ್ರಚೋದನಕಾರಿ ಭಾಷಣ ಮಾಡಿದ್ದು, ಪಿಒಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.