alex Certify ಕನ್ನಯ್ಯಾಲಾಲ್ ಶಿರಚ್ಛೇದ ಖಂಡಿಸಿ ರಾಜ್ಯದಲ್ಲೂ ಆಕ್ರೋಶ: ಬಂದ್ ಕರೆ, ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಯ್ಯಾಲಾಲ್ ಶಿರಚ್ಛೇದ ಖಂಡಿಸಿ ರಾಜ್ಯದಲ್ಲೂ ಆಕ್ರೋಶ: ಬಂದ್ ಕರೆ, ಪ್ರತಿಭಟನೆ

ಬೆಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಕನ್ನಯ್ಯಾಲಾಲ್ ಶಿರಚ್ಛೇದ ಪ್ರಕರಣ ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಗುವುದು.

ಬೆಳಗ್ಗೆ 11:30 ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಪ್ರತಿಭಟನೆ ನಡೆಯಲಿದ್ದು, ಪಕ್ಷದ ನಾಯಕರು ಭಾಗಿಯಾಗಲಿದ್ದಾರೆ.

ಕನ್ನಯ್ಯಾಲಾಲ್ ಕೊಲೆ ಖಂಡಿಸಿ ಇಂದು ಹೊಸಪೇಟೆ ಬಂದ್ ಗೆ ಕರೆ ನೀಡಲಾಗಿದೆ. ಶ್ರೀರಾಮ ಸೇನೆ ಮತ್ತು ಹಿಂದೂ ಪರ ಸಂಘಟನೆಗಳು ಬಂದ್ ಕರೆ ನೀಡಿದ್ದು, ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಬಂದ್ ಗೆ ಕರೆ ನೀಡಲಾಗಿದೆ.

ರಾಜ್ಯದ ವಿವಿಧೆಡೆ ಕನ್ನಯ್ಯಾಲಾಲ್ ಹತ್ಯೆ ವಿರೋಧಿಸಿ ಪ್ರತಿಭಟನೆ ನಡೆಸಲಾಗಿದ್ದು, ಹಂತಕರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...