ನವದೆಹಲಿ: ಮಹಾರಾಷ್ಟ್ರ ರಾಜ್ಯಪಾಲರ ಆದೇಶದಂತೆ ನಾಳೆ ಬೆಳಗ್ಗೆ 11 ಗಂಟೆಗೆ ವಿಶ್ವಾಸಮತ ಯಾಚಿಸಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಸುಪ್ರೀಂ ಕೋರ್ಟ್ ನಲ್ಲಿ ಉದ್ಧವ್ ಠಾಕ್ರೆಗೆ ಹಿನ್ನಡೆಯಾಗಿದ್ದು, ವಿಶ್ವಾಸ ಮತಯಾಚನೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ಮಹಾರಾಷ್ಟ್ರ ರಾಜ್ಯಪಾಲರ ಆದೇಶದಂತೆ ವಿಶ್ವಾಸಮತಯಾಚಿಸಿ ಸಂಜೆ 5 ಗಂಟೆಯೊಳಗೆ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಮಹಾ ವಿಕಾಸ ಅಘಾಡಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಇದರೊಂದಿಗೆ ವಿಶ್ವಾಸಮತ ಯಾಚನೆಗೆ ಸಮಯಾವಕಾಶ ನೀಡಬೇಕೆಂದು ಶಿವಸೇನೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದರಿಂದಾಗಿ ಸಿಎಂ ಉದ್ಧವ್ ಕಾನೂನು ಹೋರಾಟದಲ್ಲಿ ಸೋತಿದ್ದಾರೆ.