ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಉದ್ಧವ್ ಠಾಕ್ರೆ ಘೋಷಿಸಿದ್ದಾರೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ಮಹಾವಿಕಾಸ ಅಘಾಡಿ ಸರ್ಕಾರ ಪತನವಾಗಿದೆ.
ನಾಳೆ ವಿಶ್ವಾಸ ಮತ ಯಾಚನೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಸಿಎಂ ಠಾಕ್ರೆ ಘೋಷಿಸಿದ್ದಾರೆ. ಎನ್ಸಿಪಿ ನಾಯಕ ಶರದ್ ಪವಾರ್, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಪುಟ ಸಹೋದ್ಯೋಗಿಗಳು, ಮಹಾರಾಷ್ಟ್ರ ಜನತೆ, ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಹೇಳಿದ್ದಾರೆ.
ಸದನದಲ್ಲಿ ವಿಶ್ವಾಸಮತ ಯಾಚನೆಗೆ ಮೊದಲೇ ಉದ್ಧವ್ ಠಾಕ್ರೆ ರಾಜಿನಾಮೆ ಘೋಷಣೆ ಮಾಡಿದ್ದಾರೆ. ಅಲ್ಲದೇ ಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಇತ್ತ ಹೋಟೆಲ್ ನಲ್ಲಿ ತಂಗಿದ್ದ ಬಿಜೆಪಿ ಶಾಸಕರು ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರಿಗೆ ಸಿಹಿ ತಿನ್ಸಿಸಿ ಸಂಭ್ರಮಿಸಿದ್ದಾರೆ. ಶಿವಸೇನೆ ಬಂಡಾಯ ಶಾಸಕರು ಸಂಭ್ರಮಾಚರಣೆ ನಡೆಸಿದ್ದಾರೆ.