ಮುಂಬೈನಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ಗಾಯಕ ಉದಿತ್ ನಾರಾಯಣ್ ಅವರ ವಸತಿ ಕಟ್ಟಡದಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದೆ.
ವಿದ್ಯುತ್ ಉಪಕರಣಗಳಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಗಾಯಕ ಉದಿತ್ ನಾರಾಯಣ್ ಅವರ ಸ್ಕೈಪಾನ್ ಕಟ್ಟಡದಲ್ಲಿ ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಈ ಕಟ್ಟಡವು ಮುಂಬೈನ ಅಂಧೇರಿಯ ಶಾಸ್ತ್ರಿ ನಗರದಲ್ಲಿದೆ. ಕಟ್ಟಡದಲ್ಲಿದ್ದ ಅಪಾರ್ಟ್‌ಮೆಂಟ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಅಗ್ನಿಶಾಮಕ ದಳಕ್ಕೆ ಬೆಂಕಿ ನಂದಿಸಲು ಸಾಕಷ್ಟು ಸಮಯ ಹಿಡಿದಿದೆ.
ಉದಿತ್ ನಾರಾಯಣ್ ಅವರ ಕಟ್ಟಡದ 11 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗಾಯಕ ಅದೇ ಕಟ್ಟಡದ 9 ನೇ ಮಹಡಿಯಲ್ಲಿ ವಾಸಿಸುತ್ತಿದ್ದಾರೆ. ಮನೆಗೆ ಬೆಂಕಿ ತಗುಲಲು ಕಾರಣಗಳನ್ನು ಇನ್ನೂ ತನಿಖೆ ನಡೆಸಲಾಗುತ್ತಿದೆ. ಕೆಲವು ವಿದ್ಯುತ್ ಉಪಕರಣಗಳಿಗೆ ಹಾನಿಯಾದ ಕಾರಣ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.
ಗಾಯಕ ಉದಿತ್ ನಾರಾಯಣ್ ಸೇಫ್ ಆಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಘಟನೆಯಿಂದ ಶಾಕ್ ಆಗಿದ್ದಾರೆ ಎನ್ನಲಾಗಿದೆ.