alex Certify Udupi : ರೀಲ್ಸ್ ಹುಚ್ಚಾಟದಿಂದ ದಾರುಣ ಘಟನೆ : ಜಲಪಾತದಲ್ಲಿ ಜಾರಿಬಿದ್ದು ಯುವಕ ಕಣ್ಮರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Udupi : ರೀಲ್ಸ್ ಹುಚ್ಚಾಟದಿಂದ ದಾರುಣ ಘಟನೆ : ಜಲಪಾತದಲ್ಲಿ ಜಾರಿಬಿದ್ದು ಯುವಕ ಕಣ್ಮರೆ


ಉಡುಪಿ : ರೀಲ್ಸ್ ಹುಚ್ಚಾಟಕ್ಕೆ ಯುವಕ ಪ್ರಾಣ ಕಳೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಯುವಕ ಜಾರಿಬಿದ್ದು ಇದ್ದಕ್ಕಿದ್ದಂತೆ ಕಣ್ಮರೆಯಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಅರಿಶಿನಗುಂಡಿ ಜಲಪಾತದಲ್ಲಿ ನಡೆದಿದೆ.

ಮೃತನನ್ನು ಭದ್ರಾವತಿ ಮೂಲದ ಶರತ್ ಕುಮಾರ್ (23) ಎಂದು ಗುರುತಿಸಲಾಗಿದೆ. ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ಜಾರಿಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ ಎಂದು ತಿಳಿದು ಬಂದಿದೆ. ಸ್ನೇಹಿತನ ಮೊಬೈಲ್ ನಲ್ಲಿ ಈ ದೃಶ್ಯ ಸೆರೆಯಾಗಿದೆ.

ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿಗಳು ಯುವಕನ ಮೃತದೇಹ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿ, ಫಾಲ್ಸ್ ಗಳು ತುಂಬಿ ಹರಿಯುತ್ತಿದ್ದು, ಮಳೆಗಾಲಯದಲ್ಲಿ ಯುವಕರು ಎಚ್ಚರದಿಂದಿರಬೇಕು.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...