
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಡಿಸೆಂಬರ್ 3 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವೆಂಬರ್ 30 ರಿಂದ ಡಿಸೆಂಬರ್ 3 ರವರೆಗೆ ಮಳೆ ಮುಂದುವರಿಯಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ ಭಾಗದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅದೇ ರೀತಿ ಡಿಸೆಂಬರ್ 2ರಂದು ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.