ಬೆಂಗಳೂರು: ಹಿಜಾಬ್ ಗಾಗಿ ಮುಸ್ಲಿಂ ಯುವತಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎಂದು ಅವರು ವಾದ ಮಂಡಿಸಿ ಅರ್ಜಿ ಸಲ್ಲಿಸಿದ್ದಾರೆ.
ಉಡುಪಿಯ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಸಂವಿಧಾನದಡಿ ಧಾರ್ಮಿಕ ಹಕ್ಕುಗಳನ್ನು ನೀಡಲಾಗಿದೆ. ಹಿಜಾಬ್ ಧರಿಸುವುದು ಧಾರ್ಮಿಕ ಹಕ್ಕಿನ ಭಾಗವಾಗಿದೆ. ಆದರೆ, ಹಿಜಾಬ್ ಧರಿಸಲು ಕಾಲೇಜು ಅನುಮತಿ ನೀಡಿಲ್ಲ. ಹೀಗಾಗಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ವಿದ್ಯಾರ್ಥಿನಿ ಮನವಿ ಸಲ್ಲಿಸಿದ್ದಾರೆನ್ನಲಾಗಿದೆ.