alex Certify ಮತದಾನ ಮಾಡಿದ ಬೆನ್ನಲ್ಲೇ ಕೊನೆಯುಸಿರೆಳೆದ ವೃದ್ಧೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾನ ಮಾಡಿದ ಬೆನ್ನಲ್ಲೇ ಕೊನೆಯುಸಿರೆಳೆದ ವೃದ್ಧೆ

ಉಡುಪಿ: ಲೋಕಸಭೆ ಚುನಾವಣೆಯಲ್ಲಿ ವಯೋವೃದ್ಧರು, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಹೀಗೆ ಮನೆಯಿಂದಲೇ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿದ್ದಾರೆ.

ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕು ಪಾಂಡೇಶ್ವರ ಚಡಗರ ಅಗ್ರಹಾರದ ಪಿ. ಯಶೋದಾ ನಾರಾಯಣ ಉಪಾಧ್ಯ(83) ಮತದಾನ ಮಾಡಿದ ನಂತರ ನಿಧನರಾಗಿದ್ದಾರೆ. ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿವಂಗತ ನಾರಾಯಣ ಉಪಾಧ್ಯಾಯ ಅವರ ಪತ್ನಿಯಾಗಿರುವ ಯಶೋದಾ ಹಿರಿಯ ನಾಗರಿಕರ ಮನೆಯಿಂದ ಮತದಾನ ಮಾಡುವ ಸೌಲಭ್ಯದಡಿ ಮನೆಯಿಂದಲೇ ಮತದಾನ ಮಾಡಿದ್ದರು.

ನಂತರ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಾದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರು ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...