ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕಡಲ ತೀರದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಈ ನಡುವೆ ಪ್ರವಾಸಿಗರ ನೆಚ್ಚಿನ ತಾಣ ಮಲ್ಫೆ ಬೀಚ್ ನಲ್ಲಿ ಪ್ರವಾಸಿಗರಿಗೆ ನಿಇರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲೆಯಲ್ಲಿ ಬಿರಿಗಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಮಲ್ಫೆ ಕಡಲ ಕಿನಾರೆ ಪ್ರಕ್ಷುಬ್ದಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರಿಗೆ ಮಲ್ಪೆ ಬೀಚ್ ನಲ್ಲಿ ನಿಷೇಧ ಹೇರಲಾಗಿದೆ.
ಮಲ್ಪೆ ಬೀಚ್ ಬಳಿ ಬೇಲಿ ನಿರ್ಮಿಸಲಾಗಿದ್ದು, ಪ್ರವಾಸಿಗರು ತೆರಳದಂತೆ ಸೂಚಿಸಲಾಗಿದೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿ ಹಾಗೂ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅನೇಕ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಏಳು ಅಡಿ ಎತ್ತರದವರೆಗೆ ತಡೆ ಬೇಲಿಗಳನ್ನು ನಿರ್ಮಾಣಮಾಡಲಾಗಿದೆ. ಎಚ್ಚರುಇಕೆ ಸಂದೇಶ ನಿಟ್ಟಿನಲ್ಲಿ ಕೆಂಪು ಬಾವುಟಗಳನ್ನು ಹಾಕಲಾಗಿದೆ. ಆಯಕಟ್ಟಿನ ಪ್ರದೇಶಗಳಲ್ಲಿ ಬೀಚ್ ಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ನಾಅಫಲಕಗಳನ್ನು ಅಳವಡಿಸಲಾಗಿದೆ.
ಬೀಚ್ ಬಳಿ ತರಬೇತಿ ಪಡೆದಿರುವ ಜೀವರಕ್ಷಕ ದಳದವರನ್ನು ನಿಯೋಜಿಸಲಾಗಿದೆ ಎಟಿಬಿ ಸ್ಯಾಂಡ್ ಬೈಕ್ ಮೂಲಕ ನಿರಂತರ ಬೀಚ್ ಬಳಿ ಗಸ್ತು ತಿರುಗಲಾಗುತ್ತಿದೆ. ಯಾವುದೇ ಕಾರಣಕ್ಕೂ ಪ್ರವಾಸಿಗರು ಬೀಚ್ ಬಳಿ ಪ್ರವೇಶಿಸದಂತೆ ಕಟ್ಟೆಚ್ಚರ ವಹಿಸಲಾಗಿದೆ.