ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾಗಿದೆ. ಉಡುಪಿಯ ಸಂಪೆಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ವಾಹನ ಉರುಳಿ ಬಿದ್ದಿದೆ. ಎಸ್ಕಾರ್ಟ್ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ರಹ್ಮಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.