
ಉಡುಪಿ: ಉಡುಪಿಯ ನೇಜಾರು ಗ್ರಾಮದಲ್ಲಿ ನಡೆದ ತಾಯಿ, ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಶಿವಮೊಗ್ಗದ ಹಫಿಜ್ ಮೊಹಮ್ಮದ್ ಎಂಬಾತನ ವಿರುದ್ಧ ಉಡುಪಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೊಹಮ್ಮದ್ ಸಾಮಾಜಿಕ ಜಾಲತಾಣದಲ್ಲಿ ಪ್ರಿಪರೇಷನ್ ಇಲ್ಲದೆ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು ಎಂಬ ಬರಹ ಪ್ರಕಟಿಸಿದ್ದ. ಈ ಹಿನ್ನೆಲೆಯಲ್ಲಿ ಹಫಿಜ್ ವಿರುದ್ಧ ಅಪರಾದ ಕೃತ್ಯಕ್ಕೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವ ಪ್ರಯತ್ನದ ಆರೋಪದಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕ್ರಮ ಜರುಗಿಸಿದ್ದಾರೆ.