ಉಡುಪಿ: ಉಡುಪಿಯ ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಅತ್ರಾಡಿ ಗ್ರಾಮದ ಮದಗ ಮುಳ್ಳುಗುಜ್ಜೆಯಲ್ಲಿ ತಾಯಿ ಹಾಗೂ 10 ವರ್ಷದ ಪುತ್ರಿಯನ್ನು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಹರೀಶ್(29) ಬಂಧಿತ ಆರೋಪಿಯಾಗಿದ್ದಾನೆ. ಮೇ 8 ರಂದು ಚೆಲುವಿ(28) ಹಾಗೂ ಅವರ ಪುತ್ರಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಗಂಡನಿಂದ ದೂರವಾಗಿದ್ದ ಚೆಲುವಿಯ ದೂರದ ಸಂಬಂಧಿಯಾಗಿದ್ದ ಹರೀಶ್ ಮದುವೆಯಾಗುವಂತೆ ಪೀಡಿಸುತ್ತಿದ್ದ. ಮೇ 8 ರಂದು ಚೆಲುವಿ ಬೇರೆಯವರೊಂದಿಗೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಜಗಳವಾಡಿ ಶಾಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದ. ಸಾಕ್ಷ್ಯ ಹೇಳುವ ಭಯದಲ್ಲಿ ಆಕೆಯ ಪುತ್ರಿಯನ್ನು ಕೂಡ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದ. ನಂತರ ಚೆಲುವಿಯ ಕೊರಳಿನಲ್ಲಿದ್ದ ಚಿನ್ನದ ಸರ ಮತ್ತು ಮೊಬೈಲ್ ತೆಗೆದುಕೊಂಡು ಪರಾರಿಯಾಗಿದ್ದ. ಹಿರಿಯಡಕ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.