ಉಡುಪಿ: ಪರೀಕ್ಷಾ ಭೀತಿಯಿಂದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ್ ನಲ್ಲಿ ನಡೆದಿದೆ.
ಸತ್ಯಂ ಸುಮನ್ (19) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ. ಪರೀಕ್ಷೆ ನಡೆಯುತ್ತಿದ್ದ ವೇಳೆಯೇ ಪರೀಕ್ಷಾ ಕೇಂದ್ರದಿಂದ ಹೊರ ನಡೆದ ವಿದ್ಯಾರ್ಥಿ ಏಕಾಏಕಿ ಕಟ್ಟಡದಿಂದ ಕೆಳಗೆ ಹಾರಿ ಸಾವಿಗೆ ಶರಣಾಗಿದ್ದಾನೆ.
ಇದನ್ನು ಕಂಡ ಇತರ ವಿದ್ಯಾರ್ಥಿಗಳು ಆತಂಕದಿಂದ ಓಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.