![](https://kannadadunia.com/wp-content/uploads/2025/02/manipal-.jpg)
ಉಡುಪಿ: ಕಂಠ ಪೂರ್ತಿ ಕುಡಿದ ವಿದ್ಯಾರ್ಥಿಗಳು ಬಾರ್ ಅಂಗಡಿ ಮುಂದೆ ನಡುರಸ್ತೆಯಲ್ಲಿಯೇ ಹೊಡೆದಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಣಿಪಾಲ್ ಕಾಯಿನ್ ಸರ್ಕಾಲ್ ನಲ್ಲಿ ನಡೆದಿದೆ.
ಮದ್ಯದ ಅಮಲಿನಲ್ಲಿ ವಿದ್ಯಾರ್ಥಿಗಳ ಎರಡು ಗುಂಪು ಪರಸ್ಪರ ಹೊಡೆದಾಡಿಕೊಂಡಿದ್ದು, ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿಯ ಬಟ್ಟೆಯನ್ನು ಹರಿದು ರಂಪಾಟ ನಡೆಸಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸುತ್ತಿದ್ದಂತೆಯೇ ವಿದ್ಯಾರ್ಥಿಗಳ ಗುಂಪು ಸ್ಥಳದಿಂದ ಪರಾರಿಯಾಗಿದೆ. ವಿದ್ಯಾರ್ಥಿಗಳ ಮಾರಾಮಾರಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮಣಿಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.