ಬೆಂಗಳೂರು: ಉಡುಪಿ, ತುಮಕೂರು ಜಿಲ್ಲೆಗಳಿಗೆ ಇಎಸ್ಐ ಆಸ್ಪತ್ರೆಗಳನ್ನು ಮಂಜೂರು ಮಾಡಲಾಗಿದೆ. ದೇಶಾದ್ಯಂತ ಒಟ್ಟು 23 ನೂತನ ಇಎಸ್ಐ ಆಸ್ಪತ್ರೆಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವಾಲಯದಿಂದ ಮಾಹಿತಿ ನೀಡಲಾಗಿದೆ.
ಇಎಸ್ಐ ಆಸ್ಪತ್ರೆಗಳನ್ನು ಮಂಜೂರು ಮಾಡಲಾದ ಬಗ್ಗೆ ಮಾಹಿತಿ ನೀಡಲಾಗಿದ್ದು, 100 ಬೆಡ್ ಸಾಮರ್ಥ್ಯದ ಇಎಸ್ಐ ಆಸ್ಪತ್ರೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋದನೆ ನೀಡಲಾಗಿದೆ.
ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಉಡುಪಿಗೆ 100 ಹಾಸಿಗೆಗಳ ನೌಕರರ ರಾಜ್ಯ ವಿಮಾ (ಇಎಸ್‌ಐ) ಕಾರ್ಪೊರೇಷನ್ ಆಸ್ಪತ್ರೆಯನ್ನು ಮಂಜೂರು ಮಾಡಿದೆ. ಜೂನ್ 18 ಮತ್ತು 19 ರಂದು ನಡೆದ ತನ್ನ 188 ನೇ ಸಭೆಯಲ್ಲಿ ನಿಗಮವು ದೇಶಾದ್ಯಂತ 23 ಹೊಸ ESI ಆಸ್ಪತ್ರೆಗಳು ಮತ್ತು 62 ಹೊಸ ಔಷಧಾಲಯಗಳನ್ನು ಸ್ಥಾಪಿಸಲು ಅನುಮೋದಿಸಿದೆ ಎಂದು ESI ಕಾರ್ಪೊರೇಶನ್‌ನ ಅಧಿಸೂಚನೆಯು ತಿಳಿಸಿದೆ;
ಉಡುಪಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರ ಕಚೇರಿಯಿಂದ ಹಾಗೂ ಉಡುಪಿ ಶಾಸಕ ಕೆ.ರಘುಪತಿ ಭಟ್ ಅವರು ಪ್ರಕಟಣೆ ಹೊರಡಿಸಿದ್ದು, ಈ ಭಾಗದ ಜನರು ಇಎಸ್‌ಐ ಆಸ್ಪತ್ರೆ ಬೇಕು ಎಂದು ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದರು. ಬೇಡಿಕೆಗೆ ಸ್ಪಂದಿಸಿದ್ದಕ್ಕಾಗಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದ್ರ ಯಾದವ್ ಅವರಿಗೆ ಧನ್ಯವಾದಗಳು ಎಂದು ಹೇಳಲಾಗಿದೆ.