
ಉಡುಪಿ: ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಯಡ್ತರೆಯಲ್ಲಿ ನಡೆದಿದೆ.
ನಿನ್ನೆ ಪರೀಕ್ಷೆ ಮುಗಿಸಿ ಶನೇಶ್ವರ ದೇಗುಲದ ಹಿಂಬದಿಯಲ್ಲಿದ್ದ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರು. ಇದೀಗ ಕೆರೆಯಲ್ಲಿ ಇಬ್ಬರು ವಿದ್ಯಾರ್ಥಿಗಳ ಶವ ಪತ್ತೆಯಾಗಿದೆ.
ನಾಗೇಂದ್ರ (13) ಹಾಗೂ ಮೊಹಮ್ಮದ್ ಶಫಾನ್ (13) ಮೃತ ಬಾಲಕರು. ಇಬ್ಬರೂ ಬೈಂದೂರು ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿಗಳು. ಪರೀಕ್ಷೆ ಮುಗಿದ ಬಳಿಕ ನೇರವಾಗಿ ಮನೆಗೆ ಬರುವುದು ಬಿಟ್ಟು ಕೆರೆಯಲ್ಲಿ ಈಜಲು ಹೋಗಿ ನೀರುಪಾಲಾಗಿ ಸಾವನ್ನಪ್ಪಿದ್ದಾರೆ.