ಉಡುಪಿ : ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಮಾಹಿತಿ ಬಯಲಾಗಿದ್ದು, ತನಿಖೆ ವೇಳೆ ಮೂವರು ವಿದ್ಯಾರ್ಥಿನಿಯರು ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾರೆ.
ನಾವು ತಮಾಷೆಗಾಗಿ ವಿಡಿಯೋ ಮಾಡಿದ್ದೇವೆ, ನಂತರ ವಿಡಿಯೋ ಡಿಲೀಟ್ ಮಾಡಿದ್ದೇವೆ ಎಂದು ಹೇಳಿದ್ದಾರೆ. ಬೇರೊಬ್ಬ ವಿದ್ಯಾರ್ಥಿನಿಯ ವಿಡಿಯೋ ಮಾಡಲು ಮತ್ತೊಬ್ಬ ವಿದ್ಯಾರ್ಥಿನಿಯ ವಿಡಿಯೋ ಮಾಡಿದ್ದೇವೆ. ಅದನ್ನು ಕೂಡಲೇ ಡಿಲೀಟ್ ಮಾಡಿದ್ದೇವೆ ಎಂದು ಹೇಳಿದರು.ನಾವು ವಿಡಿಯೋ ಮಾಡಿದ್ದು ನಿಜ, ಆದರೆ ಉದ್ದೇಶಪೂರ್ವಕವಾಗಿ ಮಾಡಿಲ್ಲ ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.
ಸದ್ಯ ಪೊಲೀಸರು ಮೊಬೈಲ್ ನ್ನು ಎಫ್ ಎಸ್ ಎಲ್ ತನಿಖೆಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ಚುರುಕಾಗಿದ್ದು, ಗೌಪ್ಯ ಸ್ಥಳದಲ್ಲಿ ಪೊಲೀಸರು ವಿದ್ಯಾರ್ಥಿನಿಯರ ವಿಚಾರಣೆ ನಡೆಸಿದ್ದಾರೆ.ಪೊಲೀಸರು ಕರೆದಾಗ ತನಿಖೆಗೆ ಖುದ್ದು ಹಾಜರಾಗಬೇಕು ಎಂದು ಉಡುಪಿ ಜೆಎಂಎಫ್ಸಿ ನ್ಯಾಯಾಲಯ ಷರತ್ತುಬದ್ದ ಜಾಮೀನು ನೀಡಿತ್ತು. . ಈ ನಡುವೆ ಎರಡು ಬಾರಿ ಭೇಟಿಯಾಗಿ ಸಂತ್ರಸ್ತ ವಿದ್ಯಾರ್ಥಿನಿಯ ಹೇಳಿಕೆಯನ್ನೂ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಗೌಪ್ಯ ಸ್ಥಳದಲ್ಲಿ ಪೊಲೀಸರು ವಿದ್ಯಾರ್ಥಿನಿಯರ ವಿಚಾರಣೆ ನಡೆಸಿ ಪ್ರಕರಣದ ಸಂಬಂಧ ಹಲವು ವಿಚಾರಗಳನ್ನು ಕಲೆ ಹಾಕಿದ್ದಾರೆ.ಪ್ರಕರಣ ಸಂಬಂಧ ಕುಂದಾಪುರ ಡಿವೈಎಸ್ ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.