ಬೆಂಗಳೂರು : ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಸಿಬಿಐ ಅಥವಾ ಎನ್ ಐ ಎ ತನಿಖೆಗೆ ಒಪ್ಪಿಸಿ ಎಂದು ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸಿದೆ. ..? ಹೆಣ್ಣುಮಕ್ಕಳ ವಿಷಯದಲ್ಲಿ ರಾಜಕೀಯ ಮಾಡುತ್ತಿರುವ ಸರ್ಕಾರಕ್ಕೆ ನಾಚಿಕೆ ಆಗಬೇಕು., ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಎನ್ ಐ ಎ ಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ವಿಡಿಯೋ ಮಾಡಿದ ಮೂವರು ವಿದ್ಯಾರ್ಥಿನಿಯರನ್ನು ಇನ್ನೂ ಕೂಡ ಬಂಧಿಸಿಲ್ಲ, ಒಂದು ವೇಳೆ ಅಲ್ಪಸಂಖ್ಯಾತ ವಿದ್ಯಾರ್ಥಿನಿಯರು ಬಾತ್ ರೂಂಗೆ ಹೋದಾಗ ವಿಡಿಯೋ ಮಾಡಿದ್ದರೆ ಶಾಸಕರು ಸುಮ್ಮನೆ ಕೂರುತಿದ್ರಾ..? ಹೆಣ್ಣುಮಕ್ಕಳ ವಿಷಯದಲ್ಲಿ ರಾಜಕೀಯ ಮಾಡುತ್ತಿರುವ ಸರ್ಕಾರಕ್ಕೆ ನಾಚಿಕೆ ಆಗಬೇಕು. ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲವಾಗಿದೆ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಫಲರಾಗಿದ್ದಾರೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್. ಹಿರಿಯ ನಾಯಕಿ ತೇಜಸ್ವಿನಿ ಗೌಡ ಸೇರಿದಂತೆ ಹಲವು ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬೆಂಗಳೂರಿನ ಸದಾಶಿವನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಗೃಹ ಸಚಿವರು ಹಾಗೂ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.