ಉಡುಪಿ : ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿರುದ್ಧ FIR ದಾಖಲಾಗಿದೆ.
ಉಡುಪಿ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿಪ್ರತಿಭಟನೆ ಮಾಡುತ್ತಿದ್ದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಜುಲೈ 28ರಂದು ನಡೆದ ಪ್ರತಿಭಟನೆ ಸಭೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ಪ್ರಚೋನದಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರತಿಭಟನೆ ಸಭೆಯಲ್ಲಿ ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ,ಮದಸರಾಗಳಿಗೆ ಸೇರಿಸಿ ಎಂದು ಹೇಳಿಕೆ ನೀಡಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಬೆನ್ನಲ್ಲೇ ವೀಣಾ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ.