alex Certify ಅತಿಥಿ ಉಪನ್ಯಾಸಕರಿಗೆ ಸಚಿವರಿಂದ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಥಿ ಉಪನ್ಯಾಸಕರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಇಲ್ಲ.ಯಾರನ್ನೂ ತೆಗೆದು ಹಾಕುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯ ಬಗ್ಗೆ ಬಿಜೆಪಿಯ ರಾಜ್ಯ ಸಾಮಾಜಿಕ ಜಾಲತಾಣ ಪ್ರಕೋಷ್ಠವು ಬೆಂಗಳೂರಿನಲ್ಲಿ ಭಾನುವಾರ ಏರ್ಪಡಿಸಿದ್ದ ವರ್ಚುವಲ್ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಶಿಕ್ಷಣ ನೀತಿ ಜಾರಿ ನಂತರ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ತೆಗೆದು ಹಾಕಲಾಗುತ್ತದೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸಲಾಗುತ್ತಿದೆ. ಯಾರನ್ನೂ ತೆಗದು ಹಾಕುವ ಪ್ರಮೇಯ ಇಲ್ಲ. ಬದಲಿಗೆ ಇನ್ನೂ ಹೆಚ್ಚಿನ ಪ್ರಮಾಣದ ಬೋಧಕರು ಅಗತ್ಯವಿದ್ದಾರೆ. ಈ ಅಂಶವನ್ನು ಎಲ್ಲರೂ ಮನಗಾಣಬೇಕು ಎಂದು ಹೇಳಿದ್ದಾರೆ.

ಗೊಂದಲ ನಿರ್ಮಾಣ ಮಾಡುವುದು ಬೇಡ

ಕೆಲ ರಾಜಕೀಯ ಪಕ್ಷಗಳು ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಅನಗತ್ಯ ಗೊಂದಲ ಉಂಟು ಮಾಡುವ ಕೆಲಸ ಮಾಡುತ್ತಿವೆ. ವಿರೋಧಿಗಳೇ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವ ಮಾದರಿಯಲ್ಲಿ ನೀತಿಯನ್ನು ವ್ಯವಸ್ಥಿತವಾಗಿ ಜಾರಿಗೆ ತರುವ ಕೆಲಸ ಆಗುತ್ತಿದೆ. ನರೇಂದ್ರ ಮೋದಿ ಅವರ ದೂರದೃಷ್ಟಿ ಫಲವಾಗಿ ಈ ಶಿಕ್ಷಣ ನೀತಿ ಜಾರಿಗೆ ಬಂದಿದೆ. ಭಾರತ ವಿಶ್ವಗುರುವಾಗುವತ್ತ ಭಾರತದ ದಾಪುಗಾಲಿಟ್ಟಿದ್ದು, ಅದಕ್ಕೆ ಪೂರಕವಾಗಿ ಶಿಕ್ಷಣ ನೀತಿ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.

ಸಮಾಜದ ದೃಷ್ಟಿಯಿಂದ ಮಾತ್ರವಲ್ಲದೆ, ವೈಯಕ್ತಿಕ ನೆಲೆಗಟ್ಟಿನಲ್ಲೂ ನಾವು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳಿಗೆ ಶಿಕ್ಷಣದಲ್ಲೇ ಉತ್ತರವಿದೆ. ಶಿಕ್ಷಣ ಮತ್ತು ಕೌಶಲ್ಯತೆ ಒಟ್ಟಿಗಿದ್ದರೆ ಅದ್ಭುತಗಳನ್ನೇ ಸೃಷ್ಟಿ ಮಾಡಬಹುದು. ನಮ್ಮ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಸರಿ ಇಲ್ಲ ಅಂತಲ್ಲ. ಆದರೆ, ಅದರಲ್ಲಿನ ನ್ಯೂನತೆಗಳನ್ನು ಬಗೆಹರಿಸಿಕೊಳ್ಳುವ ಪ್ರಯತ್ನ ನಡೆದಿರಲಿಲ್ಲ. ಆ ನ್ಯೂನತೆಗಳನ್ನು ಹೋಗಲಾಡಿಸಿ ನೀತಿ ನಿಯಮಗಳಿಗೆ ಒಳಪಟ್ಟು ಶಿಕ್ಷಣವನ್ನು ಕಲಿಸಲಾಗುವುದು. ಈ ಎಲ್ಲ ವಿಷಯಗಳನ್ನು ನಾವು ಜನರಿಗೆ ಮುಟ್ಟಿಸಬೇಕಾಗಿದೆ ಎಂದು ಹೇಳಿದರು.

ಬಿಜೆಪಿ ರಾಜ್ಯ ಸಾಮಾಜಿಕ ಜಾಲತಾಣ ಪ್ರಕೋಷ್ಠದ ರಾಜ್ಯ ಸಂಚಾಲಕ ವಿನೋದ್ ಕೃಷ್ಣಮೂರ್ತಿ, ಸಹ ಸಂಚಾಲಕ ಪ್ರಶಾಂತ್ ಜಾದವ್ ಹಾಗೂ ಜಿಲ್ಲಾ, ಮಂಡಲ ವಿಭಾಗದ ಸಂಚಾಲಕರು ಹಾಜರಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...