alex Certify BIG BREAKING: ನಾಳೆಯಿಂದಲೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ವಿದ್ಯಾರ್ಥಿಗಳ ದಾಖಲು ಪ್ರಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನಾಳೆಯಿಂದಲೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ವಿದ್ಯಾರ್ಥಿಗಳ ದಾಖಲು ಪ್ರಕ್ರಿಯೆ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ಕಲಿಕೆಗೆ ನಾಳೆಯಿಂದಲೇ(ಅಗಸ್ಟ್ 23) ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದ್ದು. ಅಕ್ಟೋಬರ್ 1 ರಿಂದಲೇ ಈ ತರಗತಿಗಳು ಆರಂಭವಾಗುತ್ತವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಇಡೀ ದೇಶದಲ್ಲಿಯೇ ಶಿಕ್ಷಣ ನೀತಿಯನ್ನು ಎಲ್ಲರಿಗಿಂತ ಮೊದಲೇ ಜಾರಿ ಮಾಡುತ್ತಿರುವ ರಾಜ್ಯವೂ, ನೂತನ ಶಿಕ್ಷಣದ ನೀತಿಯ ಕಲಿಕೆಗೂ ಇತರೆ ರಾಜ್ಯಗಳಿಗಿಂತ ಮೊದಲೇ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡುತ್ತಿದೆ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯ ಬಗ್ಗೆ ಬಿಜೆಪಿಯ ರಾಜ್ಯ ಸಾಮಾಜಿಕ ಜಾಲತಾಣ ಪ್ರಕೋಷ್ಠವು ಬೆಂಗಳೂರಿನಲ್ಲಿ ಭಾನುವಾರ ಏರ್ಪಡಿಸಿದ್ದ ವರ್ಚುವಲ್ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ವರ್ಚುವಲ್ ವೇದಿಕೆ ಮೂಲಕ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಅಧಿಕೃತವಾಗಿ ನಾಳೆಯಿಂದಲೇ ಉನ್ನತ ಶಿಕ್ಷಣ ವಿಭಾಗಕ್ಕೆ ಸಂಬಂಧಿಸಿದ ಎಲ್ಲ  ಕಾಲೇಜು, ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಆರಂಭವಾಗುತ್ತದೆ. ಈ ವಿದ್ಯಾರ್ಥಿಗಳು ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲೇ ತಮ್ಮ ಆಯ್ಕೆಯ ಪಠ್ಯವನ್ನು ವ್ಯಾಸಂಗ ಮಾಡುವರು. ಅಕ್ಟೋಬರ್ ನಿಂದ  ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಬೇಕಾಗುತ್ತದೆ ಎಂದು ಹೇಳಿದರು.

ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ

ಇದರ ಜತೆಯಲ್ಲಿಯೇ ನಾಳೆ ದಿನವೇ ರಾಜ್ಯ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಯಾದ ʼಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆʼ ಎಂಬ ವಿದ್ಯಾರ್ಥಿಗಳ ದಾಖಲಾತಿ ವ್ಯವಸ್ಥೆಯೂ ಲೋಕಾರ್ಪಣೆಯಾಗುತ್ತಿದೆ. ಸರ್ಕಾರಿ ಕಾಲೇಜು ಮಾತ್ರವಲ್ಲ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲೂ ಈ ವ್ಯವಸ್ಥೆಯಲ್ಲೇ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಬೇಕು ಎಂದು ಹೇಳಿದರು.

ಇದು ಸಂಪೂರ್ಣವಾಗಿ ವೆಬ್ ಆಧಾರಿತವಾಗಿ ಆನ್ ಲೈನ್ ನಲ್ಲಿಯೇ ಅಡ್ಮಿಷನ್ ನಡೆಯುತ್ತದೆ. ಯಾವ ವಿದ್ಯಾರ್ಥಿ ಯಾವ ಕಾಲೇಜಿನಲ್ಲಿ ದಾಖಲಾಗಿದ್ದಾರೆ? ಯಾವ ಕೋರ್ಸು ತೆಗೆದುಕೊಂಡಿದ್ದಾರೆ? ಇತ್ಯಾದಿ ವಿಷಯಗಳ ಮಾಹಿತಿ ಸಂಪೂರ್ಣವಾಗಿ ಆಯಾ ವಿವಿ ಬಳಿ ಇರುತ್ತದೆ ಎಂದ ಅವರು, ಅದೇ ವಿದ್ಯಾರ್ಥಿಗಳೂ ಎಲ್ಲ ಮಾಹಿತಿಯನ್ನು ವೆಬ್ ಮೂಲಕವೇ ಪಡೆಯಬಹುದು ಎಂದರು ಅವರು.

ಯುಜಿಸಿ ಮಾರ್ಗಸೂಚಿ ಪ್ರಕಾರ ತರಗತಿ

ಕೇಂದ್ರದ ಧನ ಸಹಾಯ ಆಯೋಗ (ಯುಜಿಸಿ) ಮಾರ್ಗಸೂಚಿ ಪ್ರಕಾರವೇ ಅಕ್ಟೋಬರ್ 1ರಿಂದಲೇ ತರಗತಿಗಳನ್ನು ಆರಂಭ ಮಾಡಲು ಸರಕಾರ ನಿರ್ಧರಿಸಿದೆ. ಎಲ್ಲ ವಿವಿಗಳಿಗೂ ಇದು ಅನ್ವಯ ಆಗುತ್ತದೆ. ಅಷ್ಟರೊಳಗೆ ವಿದ್ಯಾರ್ಥಿಗಳು ಆಯಾ ಶಿಕ್ಷಣ ಸಂಸ್ಥೆಯಲ್ಲಿ ದಾಖಲಾತಿ ಮುಗಿಸಿಕೊಂಡು ಕೋರ್ಸ್ ಆಯ್ಕೆ ಮಾಡಿಕೊಳ್ಳುವುದು ಮಾಡಬೇಕು. ಎಲ್ಲವನ್ನೂ ತಂತ್ರಜ್ಞಾನದ ನೆರವಿನಿಂದಲೇ ಮಾಡುತ್ತಿರುವುದರಿಂದ ವಿಳಂಬ ಆಗುವುದಿಲ್ಲ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಶಿಕ್ಷಣ ನೀತಿಯಲ್ಲಿ ಕನ್ನಡ ಬೋಧನೆ ಮತ್ತು ಕಲಿಕೆಗೆ ಧಕ್ಕೆ ಉಂಟಾಗುತ್ತದೆ ಎಂದು ಕೆಲವರು ಹುಯಿಲೆಬ್ಬಿಸುತ್ತಿದ್ದಾರೆ. ಅಂಥದ್ದೇನೂ ಆಗುತ್ತಿಲ್ಲ. ಮೊದಲು ಒಂದು ವರ್ಷ ಮಾತೃಭಾಷೆ ಕಲಿಸುವ ಅಂಶವಿತ್ತು. ರಾಜ್ಯ ಸರಕಾರ ಅದನ್ನು ಎರಡು ವರ್ಷಗಳಿಗೆ ವಿಸ್ತರಿಸಿದೆ. ಎರಡು ವರ್ಷ ವಿದ್ಯಾರ್ಥಿ ಕಡ್ಡಾಯವಾಗಿ ತನ್ನ ಮಾತೃಭಾಷೆಯನ್ನು ವ್ಯಾಸಂಗ ಮಾಡಬೇಕಾಗುತ್ತದೆ. ಕನ್ನಡದ ವಿದ್ಯಾರ್ಥಿಗಳಿಗೂ ಇದು ಅನ್ವಯ ಆಗುತ್ತದೆ ಎಂದು ಅವರು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...